Adsterra

ಗುರುವಾರ ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ | Karnataka Weather Major Dams Water Level On November 25

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ, ಹಾರಂಗಿ, ಹೇಮಾವತಿ

ಲಿಂಗನಮಕ್ಕಿ ಜಲಾಶಯದ ಗುರುವಾರ ನೀರಿನ ಮಟ್ಟ 552.59 ಮೀಟರ್. ಡ್ಯಾಂನ ಪೂರ್ಣ ಮಟ್ಟ 554.44 ಮೀಟರ್. ಜಲಾಶಯಕ್ಕೆ ಒಳಹರಿವು 311 ಕ್ಯುಸೆಕ್. ಡ್ಯಾಂನಿಂದ ಹೊರ ಹರಿವು 4810 ಕ್ಯುಸೆಕ್ ದಾಖಲಾಗಿದೆ.

ಹಾರಂಗಿ ಜಲಾಶಯದ ಪೂರ್ಣ ಮಟ್ಟ 871.38 ಮೀಟರ್. ಗುರುವಾರ ಜಲಾಶಯದಲ್ಲಿ 870.93 ಮೀಟರ್ ನೀರಿನ ಸಂಗ್ರಹವಿದೆ. 680 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೊರ ಹರಿವು 1000 ಕ್ಯುಸೆಕ್ ಆಗಿದೆ.

ಹೇಮಾವತಿ ಜಲಾಶಯದ ಗುರುವಾರದ ನೀರಿನ ಮಟ್ಟ 887.85 ಮೀಟರ್ ಆಗಿದೆ. ಜಲಾಶಯದ ಪೂರ್ಣ ಮಟ್ಟ 890.58 ಮೀಟರ್. 4670 ಕ್ಯುಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಹೊರ ಹರಿವು 450 ಕ್ಯುಸೆಕ್.

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕೆಆರ್‌ಎಸ್, ಕಬಿನಿ, ಭದ್ರಾ ಡ್ಯಾಂ

ಕಬಿನಿ ಜಲಾಶಯದಲ್ಲಿ ಗುರುವಾರ 696.10 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 696.13 ಮೀಟರ್. ಜಲಾಶಯಕ್ಕೆ 2277ಕ್ಯುಸೆಕ್ ಒಳಹರಿವು ಇದೆ, ಹೊರ ಹರಿವು 1400 ಕ್ಯುಸೆಕ್ ಆಗಿದೆ.

ಮಂಡ್ಯದಲ್ಲಿರುವ ಕೆಆರ್‌ಎಸ್ ಈಗಾಗಲೇ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 38.04 ಮೀಟರ್ ನೀರಿನ ಸಂಗ್ರಹವಿದೆ. ಜಲಾಶಯದ ಪೂರ್ಣ ಮಟ್ಟ 38.04 ಮೀಟರ್ ಆಗಿದೆ. ಒಳಹರಿವು 6559 ಕ್ಯುಸೆಕ್ ಮತ್ತು ಹೊರ ಹರಿವು 6350 ಕ್ಯುಸೆಕ್.

ಭದ್ರಾ ಜಲಾಶಯದಲ್ಲಿ ಗುರುವಾರ 657.70 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣಮಟ್ಟ 657.73 ಮೀಟರ್. ಜಲಾಶಯಕ್ಕೆ ಒಳಹರಿವು 3903 ಕ್ಯುಸೆಕ್ ಆಗಿದೆ. ಹೊರ ಹರಿವು 2700 ಕ್ಯುಸೆಕ್ ಆಗಿದೆ.

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ತುಂಗಭದ್ರಾ, ಆಲಮಟ್ಟಿ, ನಾರಾಯಣಪುರ

ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ. ಗುರುವಾರ ಡ್ಯಾಂನಲ್ಲಿ 497.71 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂನ ಪೂರ್ಣಮಟ್ಟ 497.71 ಮೀಟರ್. ಜಲಾಶಯಕ್ಕೆ 23743 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಆಲಮಟ್ಟಿ ಜಲಾಶಯದ ಪೂರ್ಣ ಮಟ್ಟ 519.60 ಮೀಟರ್. ಗುರುವಾರ ಜಲಾಶಯದ ನೀರಿನ ಮಟ್ಟ 518.41 ಮೀಟರ್ ಆಗಿದೆ. ಒಳ ಹರಿವು 6800 ಕ್ಯುಸೆಕ್, ಹೊರ ಹರಿವು 1580 ಕ್ಯುಸೆಕ್ ಆಗಿದೆ.

ನಾರಾಯಣಪುರ ಜಲಾಶಯದ ಗುರುವಾರದ ನೀರಿನ ಮಟ್ಟ 491.99 ಮೀಟರ್. ಡ್ಯಾಂ ಪೂರ್ಣ ಮಟ್ಟ 492.25 ಮೀಟರ್. ಒಳಹರಿವು 741 ಕ್ಯುಸೆಕ್ ಆಗಿದೆ.

ಸೂಪ, ಘಟಪ್ರಭಾ, ಮಲಪ್ರಭಾ

ಸೂಪ, ಘಟಪ್ರಭಾ, ಮಲಪ್ರಭಾ

ಸೂಪಾ ಜಲಾಶಯದಲ್ಲಿ ಗುರುವಾರ 555.08 ಮೀಟರ್ ನೀರಿನ ಸಂಗ್ರಹವಿದೆ. ಡ್ಯಾಂ ಪೂರ್ಣ ಮಟ್ಟ 564.00 ಮೀಟರ್ ಆಗಿದೆ. ಜಲಾಶಯದ ಒಳ ಹರಿವು 414 ಕ್ಯುಸೆಕ್ ಮತ್ತು ಹೊರ ಹರಿವು 1713 ಕ್ಯುಸೆಕ್ ಆಗಿದೆ.

ಘಟಪ್ರಭಾ ಜಲಾಯಶದ ಪೂರ್ಣ ಮಟ್ಟ 662.91 ಮೀಟರ್. ಗುರುವಾರ ಜಲಾಶಯದಲ್ಲಿ 660.05 ಮೀಟರ್ ನೀರಿದೆ. ಜಲಾಶಯದ ಹೊರ ಹರಿವು 183 ಕ್ಯುಸೆಕ್ ಆಗಿದೆ.

ಮಲಪ್ರಭಾ ಜಲಾಶಯದಲ್ಲಿ ಗುರುವಾರ 633.04 ಮೀಟರ್ ನೀರಿನ ಸಂಗ್ರಹವಿದೆ. ಪೂರ್ಣ ಮಟ್ಟ 633.80 ಮೀಟರ್. ಒಳಹರಿವು 269 ಕ್ಯುಸೆಕ್.

Source link

Leave a Reply

Your email address will not be published. Required fields are marked *

WP Tumblr Auto Publish Powered By : XYZScripts.com
Adsterra
Follow by Email
WhatsApp