ಹುಬ್ಬಳ್ಳಿ; ಕೆಲಸ ಖಾಲಿ ಇದೆ, ನವೆಂಬರ್ 26ರೊಳಗೆ ಅರ್ಜಿ ಹಾಕಿ | Apply For Guest Faculty Post In Karnataka State Law University in Hubballi

Jobs

oi-Gururaj S

|

ಹುಬ್ಬಳ್ಳಿ, ನವೆಂಬರ್ 18; ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಅತಿಥಿ ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 26 ಕೊನೆಯ ದಿನವಾಗಿದೆ.

ಒಟ್ಟು 18 ಅತಿಥಿ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಗೊಂಡವರಿಗೆ ಪ್ರತಿ ಗಂಟೆಗೆ 325 ರೂ. ನೀಡಲಾಗುತ್ತದೆ.

ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ

ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ

ಕಾನೂನು 12, ಕನ್ನಡ 2, ಪೊಲಿಟಿಕಲ್ ಸೈನ್ಸ್ 1, ಸೋಶಿಯಾಲಜಿ 1, ಎಕಾನಾಮಿಕ್ಸ್ 1, ಮ್ಯಾನೇಜ್‌ಮೆಂಟ್ 1 ಹುದ್ದೆಗೆ ಅತಿಥಿ ಬೋಧಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

Apply For Guest Faculty Post In Karnataka State Law University

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ 55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಸೂಕ್ತ ದಾಖಲಾತಿಗಳ ಜೊತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ವಿಳಾಸ; Registrar, Karnataka State Law University, Navanagar, Hubballi 580025. (ಅರ್ಜಿಗಳನ್ನು ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದು).

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಂಗಾವತಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತಿಗಳಿಗಾಗಿ 2021-22ನೇ ಸಾಲಿನಲ್ಲಿ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಬ್ಯಾಂಕ್ ಆಫ್​ ಬರೋಡದಲ್ಲಿ ಉದ್ಯೋಗವಕಾಶ: ಈ ಅಭ್ಯರ್ಥಿಗಳು ಅರ್ಜಿ ಹಾಕಿ

ಬ್ಯಾಂಕ್ ಆಫ್​ ಬರೋಡದಲ್ಲಿ ಉದ್ಯೋಗವಕಾಶ: ಈ ಅಭ್ಯರ್ಥಿಗಳು ಅರ್ಜಿ ಹಾಕಿ

ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಎಲೆಕ್ಟ್ರಿಕಲ್), ಫಿಟ್ಟರ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಮೆಕ್ಯಾನಿಕಲ್), ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಹುದ್ದೆಗೆ (2) ಐಟಿಐ/ ಎಟಿಎಸ್ ಡಿಇ&ಸಿ, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗೆ (2) ಐಟಿಐ/ ಎಟಿಎಸ್/ ಡಿಪ್ಲೊಮಾ ಆಟೋಮೊಬೈಲ್/ ಡಿಎಂಇ, ವರ್ಕ್ ಶಾಪ್ ಕ್ಯಾಲ್ಕುಲೇಷನ್ ಹುದ್ದೆಗೆ ಡಿಎಂಇ/ ಬಿಇ ವಿದ್ಯಾರ್ಹತೆ ಹೊಂದಿರುವ ಕನಿಷ್ಟ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನವೆಂಬರ್ 25ರ ತನಕ ಅವಧಿ ವಿಸ್ತರಿಸಲಾಗಿದೆ. ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ ಇವರನ್ನು ಸಂಪರ್ಕಿಸಬಹುದಾಗಿದೆ. ಮೊಬೈಲ್ ಸಂಖ್ಯೆ 9448259832.

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಸಲ್ಲಿಸಿ; ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತಿಗಳಿಗಾಗಿ 2021-22 ನೇ ಸಾಲಿನಲ್ಲಿ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಎಲೆಕ್ಟ್ರಿಕಲ್) ಹಾಗೂ ಫಿಟ್ಟರ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಕನಿಷ್ಟ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕನಕಗಿರಿ ಇವರನ್ನು ಸಂಪರ್ಕಿಸಬಹುದಾಗಿದೆ. ಮೊಬೈಲ್ ಸಂಖ್ಯೆ 9448259832.

ಅರ್ಜಿ ಹಾಕಿ; 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹೆಚ್ಚುವರಿ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

600 ವರ್ಷಗಳ ನಂತರ ನಾಳೆ ಸಂಭವಿಸಲಿದೆ ಸುದೀರ್ಘ ಚಂದ್ರಗ್ರಹಣ | Oneindia Kannada

ವಾಣಿಜ್ಯ ಶಾಸ್ತ್ರ, ಸಮಾಜ ಶಾಸ್ತ್ರ, ಕನ್ನಡ, ಗಣಕಯಂತ್ರ, ರಾಜ್ಯಶಾಸ್ತ್ರ ಹಾಗೂ ಇಂಗ್ಲೀಷ್ ವಿಷಯಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಭೇಟಿ ನೀಡುವಂತೆ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary

Apply for 18 guest faculty post in Karnataka state law university. Candidates can apply till November 28, 2021.

Source link

Leave a Reply

Your email address will not be published. Required fields are marked *

Email

contact@thriftyourwallet.com

Pages

WP Tumblr Auto Publish Powered By : XYZScripts.com